Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:12 - ಪರಿಶುದ್ದ ಬೈಬಲ್‌

12 ಅನ್ಯಜನರ ಮಧ್ಯೆ ವಾಸಿಸುವ ಯೆಹೂದ್ಯರು ನಮ್ಮ ಬಳಿಗೆ ಬಂದು ಹತ್ತು ಬಾರಿ ನಮಗೆ ತಿಳಿಸಿದರು. “ವೈರಿಗಳು ನಮ್ಮ ಸುತ್ತಮುತ್ತಲೂ ಇದ್ದಾರೆ. ನಾವು ಎತ್ತ ತಿರುಗಿದರೂ ಅಲ್ಲಿ ಅವರಿದ್ದಾರೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು, “ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ,” ಎಂದು ಪದೇ ಪದೇ ತಿಳಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ - ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ತಿಳಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದು, “ನೀವು ತಿರುಗಿಕೊಳ್ಳುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಯುದ್ಧಕ್ಕೆ ಬಂದಾರು,” ಎಂದು ನಮಗೆ ಹತ್ತು ಬಾರಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:12
7 ತಿಳಿವುಗಳ ಹೋಲಿಕೆ  

ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.


ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.


ಅಲ್ಲದೆ ನಮ್ಮ ವೈರಿಗಳು, ‘ನಾವು ಅವರ ಮೇಲೆ ಇದ್ದಕ್ಕಿದ್ದಂತೆ ಆಕ್ರಮಣ ಮಾಡುವುದರಿಂದ ನಾವು ಅವರ ಮಧ್ಯದಲ್ಲಿರುವ ತನಕ ಅವರಿಗೆ ಗೊತ್ತಾಗುವುದೂ ಇಲ್ಲ ಕಾಣುವುದೂ ಇಲ್ಲ. ನಾವು ಅವರನ್ನು ಕೊಂದಾಗ ಕೆಲಸ ತಾನಾಗಿಯೇ ನಿಂತುಹೋಗುವುದು’ ಎಂದು ಹೇಳುತ್ತಿದ್ದಾರೆ” ಎಂದರು.


ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು.


ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು