Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:14 - ಪರಿಶುದ್ದ ಬೈಬಲ್‌

14 ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:14
34 ತಿಳಿವುಗಳ ಹೋಲಿಕೆ  

ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.


ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.


ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದ್ದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’


ಆದರೆ ಬಹುಕಾಲದ ಹಿಂದೆ ನಡೆದವುಗಳನ್ನು ಜ್ಞಾಪಿಸಿಕೊಳ್ಳುವೆನು. ನೀನು ಮಾಡಿದ ಅನೇಕ ಅದ್ಭುತಕಾರ್ಯಗಳನ್ನು ಆಲೋಚಿಸುವೆನು.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಕಾರ್ಯಗಳು ಅತ್ಯದ್ಭುತವಾಗಿವೆ!


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ.


ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ಯೆಹೋವನು ನಿಮಗೋಸ್ಕರ ಯುದ್ಧಮಾಡುವನು. ಆದ್ದರಿಂದ ನೀವು ಸುಮ್ಮನೆ ಇರಿ” ಎಂದು ಹೇಳಿದನು.


ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧ ಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.


ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.


“ಉತ್ತರದ ರಾಜನು ಪರಿಶುದ್ಧ ನಿಬಂಧನೆಯನ್ನು ತೊರೆದ ಯೊಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಆ ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕೃತ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಆತನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು.


ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು