Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:16 - ಪರಿಶುದ್ದ ಬೈಬಲ್‌

16 ಆ ದಿವಸದಿಂದ ನನ್ನ ಜನರು ಅರ್ಧಭಾಗ ಗೋಡೆಯ ಕೆಲಸದಲ್ಲಿ ನಿರತರಾದರು; ಉಳಿದ ಅರ್ಧ ಜನರು ಭರ್ಜಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಕಾವಲಾಗಿದ್ದರು; ಗೋಡೆಯನ್ನು ಕಟ್ಟುತ್ತಿದ್ದ ಯೆಹೂದದ ಜನರ ಹಿಂಭಾಗದಲ್ಲಿ ಸೈನ್ಯಾಧಿಕಾರಿಗಳು ನಿಂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು; ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ ಗುರಾಣಿ ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಂದಿನಿಂದ ನನ್ನ ಸೇವಕರಲ್ಲಿ ಅರ್ಧ ಜನರು ಕೆಲಸದಲ್ಲಿ ನಿರತರಾದರು; ಮಿಕ್ಕ ಅರ್ಧ ಜನರು ಈಟಿಗಳನ್ನೂ, ಗುರಾಣಿಗಳನ್ನೂ, ಬಿಲ್ಲುಗಳನ್ನೂ, ಕವಚಗಳನ್ನೂ ಧರಿಸಿದರು. ಪ್ರಧಾನರು ಗೋಡೆ ಕಟ್ಟುವವರಾದ ಯೆಹೂದ ಮನೆಯವರ ಹಿಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:16
8 ತಿಳಿವುಗಳ ಹೋಲಿಕೆ  

ಇದರಿಂದಾಗಿ ಯಾರೂ ತಮ್ಮ ವಸ್ತ್ರಗಳನ್ನು ಬದಲಾಯಿಸಲಿಲ್ಲ. ನಾನಾಗಲಿ ನನ್ನ ಬಂಧುಗಳಾಗಲಿ ನನ್ನ ಜನರಾಗಲಿ ಪಹರೆಯವರಾಗಲಿ ವಸ್ತ್ರಗಳನ್ನು ಬದಲಾಯಿಸದೆ ಆಯುಧಗಳನ್ನು ಧರಿಸಿಕೊಂಡೇ ಇದ್ದೆವು. ನೀರು ಕುಡಿಯುವಾಗಲೂ ಆಯುಧ ಸನ್ನದ್ಧರಾಗಿರುತ್ತಿದ್ದೆವು.


ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.


ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.


ಗೋಡೆ ಕಟ್ಟುವವರೂ ಅವರ ಸಹಾಯಕರೂ ಒಂದು ಕೈಯಲ್ಲಿ ಆಯುಧ ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಕೆಲಸ ಮಾಡುತ್ತಿದ್ದರು.


ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.


ತಲೆಯನ್ನು ತೂರಿಸುವುದಕ್ಕೆ ಮಧ್ಯದಲ್ಲಿ ಒಂದು ಸಂದು ಮಾಡಿಸು. ಈ ಸಂದಿನ ಸುತ್ತಲೂ ಹೆಣೆದ ಬಟ್ಟೆಯನ್ನು ಹೊಲಿಸು. ಈ ಬಟ್ಟೆಯು ಸಂದು ಹರಿದುಹೋಗದಂತೆ ಕಾಪಾಡುವುದು.


ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು