ನೆಹೆಮೀಯ 4:2 - ಪರಿಶುದ್ದ ಬೈಬಲ್2 ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.