ನೆಹೆಮೀಯ 4:3 - ಪರಿಶುದ್ದ ಬೈಬಲ್3 ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ, ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು. ಅಧ್ಯಾಯವನ್ನು ನೋಡಿ |
ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”