Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:10 - ಪರಿಶುದ್ದ ಬೈಬಲ್‌

10 ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು, ನನ್ನ ಸಹೋದರರು, ಸೇವಕರು ಸಹ, ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು, ನನ್ನ ಸಹೋದರರು, ಸೇವಕರು ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:10
18 ತಿಳಿವುಗಳ ಹೋಲಿಕೆ  

ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,


ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.


ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ.


“ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸಕಾರ್ಯಗಳಿಗೆ ಉಪಯೋಗಿಲ್ಪಡಬೇಕು.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು