Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:17 - ಪರಿಶುದ್ದ ಬೈಬಲ್‌

17 ಇಷ್ಟೇ ಅಲ್ಲದೆ ಯಾವಾಗಲೂ ನೂರೈವತ್ತು ಮಂದಿ ಯೆಹೂದ್ಯರಿಗೆ ನನ್ನ ಮೇಜಿನ ಮೇಲೆ ಊಟಕ್ಕೆ ಬಡಿಸುತ್ತಿದ್ದೆನು. ನಮ್ಮ ಸುತ್ತಲಿನ ಪ್ರಾಂತ್ಯಗಳಿಂದ ಬಂದ ಜನರೂ ನಮ್ಮೊಂದಿಗೆ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ, ಯೆಹೂದ್ಯರಲ್ಲಿ ನೂರೈವತ್ತುಮಂದಿ ಅಧಿಕಾರಿಗಳು ಹಾಗು ಸುತ್ತಣ ಜನಾಂಗಗಳ ಮಧ್ಯೆ ಇಂದ ನಮ್ಮ ಬಳಿಗೆ ಬರುತ್ತಿದ್ದವರು ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರೂ, ಯೆಹೂದ್ಯರೂ, ಅಧಿಕಾರಿಗಳೂ ನೂರ ಐವತ್ತು ಮಂದಿ ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:17
8 ತಿಳಿವುಗಳ ಹೋಲಿಕೆ  

ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.


ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ.


“ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದ್ದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು