Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:18 - ಪರಿಶುದ್ದ ಬೈಬಲ್‌

18 ಪ್ರತಿದಿನ ನಮ್ಮ ಊಟಕ್ಕಾಗಿ ಒಂದು ಹೋರಿಯನ್ನು, ಆರು ಕೊಬ್ಬಿದ ಕುರಿಗಳನ್ನು ಮತ್ತು ಅನೇಕ ಕೋಳಿಗಳನ್ನು ಕೊಯ್ಯಲಾಗುತ್ತಿತ್ತು; ಹತ್ತುದಿನಕ್ಕೊಮ್ಮೆ ವಿವಿಧ ರೀತಿಯ ದ್ರಾಕ್ಷಾರಸವನ್ನು ಒದಗಿಸಿಕೊಡುತ್ತಿದ್ದೆನು. ಆದರೂ ರಾಜ್ಯಪಾಲನಿಗೆ ಸಲ್ಲಬೇಕಾಗಿದ್ದ ಆಹಾರಪದಾರ್ಥಗಳನ್ನು ನಾನೆಂದೂ ಕೇಳಲಿಲ್ಲ; ಅದಕ್ಕಾಗಿ ಜನರಿಂದ ತೆರಿಗೆ ತೆಗೆದುಕೊಳ್ಳಲಿಲ್ಲ. ಯಾಕೆಂದರೆ ನನ್ನ ಜನರು ಮಾಡುವ ಕೆಲಸವು ತುಂಬಾ ಪ್ರಯಾಸಕರವಾದದ್ದೆಂದು ನನಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕರು, ಕೆಲವು ಕೋಳಿಗಳು ನಮ್ಮ ಭೋಜನಕ್ಕಾಗಿ ಸಿದ್ಧ ಆಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲ ತರದ ದ್ರಾಕ್ಷಾರಸವನ್ನು ಬೇಕಾಗುವಷ್ಟು ಒದಗಿಸಿಕೊಡುತ್ತಿದ್ದೆ. ನನಗೆ ಇಷ್ಟೆಲ್ಲಾ ವೆಚ್ಚ ಆಗುತ್ತಿದ್ದರೂ, ಆ ಜನರು ಮಾಡಬೇಕಾಗಿದ್ದ ಕೆಲಸ ಬಹುಕಷ್ಟಕರವಾಗಿದ್ದುದರಿಂದ, ನಾನು ರಾಜಪಾಲನೆಗೆ ಸಲ್ಲತಕ್ಕ ಭತ್ಯವನ್ನು ವಸೂಲಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪ್ರತಿದಿನ ಒಂದು ಹೋರಿ ಆರು ಕೊಬ್ಬಿದ ಕುರಿ ಕೆಲವು ಕೋಳಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿವಸಕ್ಕೊಮ್ಮೆ ನಾನು ಎಲ್ಲಾ ತರದ ದ್ರಾಕ್ಷಾರಸವನ್ನು ಬೇಕಾಗುವಷ್ಟು ಒದಗಿಸಿಕೊಡುತ್ತಿದ್ದೆನು. ನನಗೆ ಇಷ್ಟು ವೆಚ್ಚವಾಗುತ್ತಿದ್ದರೂ ಆ ಜನರು ಮಾಡತಕ್ಕ ಕೆಲಸವು ಬಹು ಭಾರವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಆಯವನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪ್ರತಿದಿನಕ್ಕೆ ಒಂದು ಎತ್ತು, ಉತ್ತಮವಾದ ಆರು ಕುರಿಗಳು, ಕೋಳಿಗಳು, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವು ನನಗೋಸ್ಕರ ಸಿದ್ಧವಾಗುತ್ತಿದ್ದವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದುದರಿಂದ ನಾನು ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ಬೇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:18
6 ತಿಳಿವುಗಳ ಹೋಲಿಕೆ  

ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.


ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.


“ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದ್ದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು