Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:1 - ಪರಿಶುದ್ದ ಬೈಬಲ್‌

1 ಸನ್ಬಲ್ಲಟನಿಗೆ, ಟೋಬೀಯನಿಗೆ, ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಗೋಡೆಯನ್ನು ಕಟ್ಟಿಸಿ ತೀರಿಸಿ ಬಾಗಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸದಿದ್ದರೂ ಎಲ್ಲಾ ಸಂದುಗಳನ್ನು ಕೂಡಿಸಿದ ಸಂಗತಿಯು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:1
10 ತಿಳಿವುಗಳ ಹೋಲಿಕೆ  

ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.


ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.


ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.


ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣಿಗಳನ್ನಿಟ್ಟು ಭದ್ರಪಡಿಸಿದರು.


ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಯೋಯಾದ ಮತ್ತು ಮೆಷುಲ್ಲಾಮ್ ಹಳೆಬಾಗಿಲನ್ನು ಜೋಡಿಸಿದರು. ಯೋಯಾದನು ಪಾಸೇಹನ ಮಗ; ಮೆಷುಲ್ಲಾಮನು ಬೆಸೋದ್ಯನ ಮಗ. ಅವರು ತೊಲೆಗಳನ್ನು ಇಟ್ಟರು; ಬಾಗಿಲುಗಳನ್ನು, ಕದಗಳನ್ನು, ಅಗುಳಿಗಳನ್ನು ಜೋಡಿಸಿದರು.


ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು; ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.


ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು