Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:10 - ಪರಿಶುದ್ದ ಬೈಬಲ್‌

10 ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ. ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಂದು ದಿನ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆ. ಅವನು ಅಲ್ಲಿ ಅವಿತುಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಬರುತ್ತಾರೆ; ಈ ರಾತ್ರಿಯೇ ಬರುತ್ತಾರೆ! ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿಯನ್ನು ಸೇರಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಂದು ದಿವಸ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ - ನಿನ್ನನ್ನು ಕೊಲ್ಲುವದಕ್ಕೆ ಬರುತ್ತಾರೆ, ಈ ರಾತ್ರಿಯೇ ಬರುತ್ತಾರೆ. ಆದದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಪವಿತ್ರಸ್ಥಾನವನ್ನು ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತರುವಾಯ ನಾನು ಅಡಗಿಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯ, ಇವನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನು, “ನಾವಿಬ್ಬರೂ ದೇವರ ಆಲಯದಲ್ಲಿ ಪವಿತ್ರಸ್ಥಾನದೊಳಗೆ ಹೋಗಿ, ಮಂದಿರದ ಬಾಗಿಲನ್ನು ಮುಚ್ಚಿಕೊಳ್ಳೋಣ ಬಾ, ಏಕೆಂದರೆ ಈ ರಾತ್ರಿಯೇ ನಿನ್ನನ್ನು ಕೊಂದುಹಾಕಲು ಬರುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:10
21 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.


ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.


ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆಗ ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಬಳಿಕ ಆತನು ನನಗೆ, “ನೀನು ನಿನ್ನ ಮನೆಯೊಳಗೆ ಹೋಗಿ ಒಳಗಿನಿಂದ ಕದವನ್ನು ಹಾಕಿಕೊ.


ಕೆಡುಕರು ತಮ್ಮ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾರೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.


ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.


ಹಾರೀಮ್‌ನ ಸಂತತಿಯಿಂದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,


ಆಗ ನಾನು ಎಲಿಯೆಜರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ ಮತ್ತು ಮೆಷುಲ್ಲಾಮ್ ಎಂಬ ನಾಯಕರನ್ನು ಕರೆದೆನು. ಅಲ್ಲದೆ (ಬೋಧಕರುಗಳಾದ) ಯೋಯಾರೀಬ್ ಮತ್ತು ಎಲ್ನಾತಾನ್ ಎಂಬವರನ್ನು ಕರೆದು


ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪಸುಡುವದನ್ನೂ ಸರ್ವಾಂಗಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು.


ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು.


ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು.


ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.


ಅಹಾಬನ ಕುಟುಂಬವೆಲ್ಲ ಸಾಯುತ್ತದೆ. ಅಹಾಬನ ಕುಟುಂಬದಲ್ಲಿ ಒಬ್ಬ ಗಂಡಸಾದರೂ ಜೀವಿಸಿರಲು ನಾನು ಬಿಡುವುದಿಲ್ಲ. ಆ ಗಂಡಸು ಇಸ್ರೇಲಿನಲ್ಲಿ ಸ್ವತಂತ್ರವಾಗಿರಲಿ ಇಲ್ಲವೆ ಗುಲಾಮನಾಗಿರಲಿ ಅದು ನನಗೆ ಮುಖ್ಯವಲ್ಲ.


ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.


ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು