ನೆಹೆಮೀಯ 6:11 - ಪರಿಶುದ್ದ ಬೈಬಲ್11 ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು. ಅಧ್ಯಾಯವನ್ನು ನೋಡಿ |
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.