ನೆಹೆಮೀಯ 6:12 - ಪರಿಶುದ್ದ ಬೈಬಲ್12 ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ, ನನ್ನ ಬಗ್ಗೆ ಆ ಕಾಲಜ್ಞಾನ ವಚನವನ್ನು ಉಚ್ಚರಿಸುವುದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ; ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರೆಂದು ನನಗೆ ಗೊತ್ತು ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ ನನ್ನ ವಿಷಯವಾಗಿ ಆ ಕಾಲಜ್ಞಾನವಚನವನ್ನು ಉಚ್ಚರಿಸುವದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ, ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರು ಎಂದು ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.