ನೆಹೆಮೀಯ 6:14 - ಪರಿಶುದ್ದ ಬೈಬಲ್14 ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ದೇವರೇ, ನೀವು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ, ಸನ್ಬಲ್ಲಟನನ್ನೂ, ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.