“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.