Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:17 - ಪರಿಶುದ್ದ ಬೈಬಲ್‌

17 ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದೇ ಸಮಯದಲ್ಲಿ, ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರವ್ಯವಹಾರ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಶ್ರೇಷ್ಠರು ಟೋಬೀಯನ ಬಳಿಗೆ ಬಹಳ ಪತ್ರಗಳನ್ನು ಕಳುಹಿಸಿದರು. ಟೋಬೀಯನಿಂದ ಉತ್ತರ ಅವರಿಗೆ ಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:17
8 ತಿಳಿವುಗಳ ಹೋಲಿಕೆ  

ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.


ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,


ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.


ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.


ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು.


ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು