ನೆಹೆಮೀಯ 6:19 - ಪರಿಶುದ್ದ ಬೈಬಲ್19 ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕಾಗಿ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ, ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀಯನೂ ನನ್ನನ್ನು ಭಯಪಡಿಸುವುದಕ್ಕೆ ಪತ್ರಗಳನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |