Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:2 - ಪರಿಶುದ್ದ ಬೈಬಲ್‌

2 ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾದಾಗ ಅವರಲ್ಲಿ ಸನ್ಬಲ್ಲಟ್ ಗೆಷೆಮರು ನನಗೆ - ಓನೋ ತಗ್ಗಿನ ಹಕ್ಕೆಫಿರೀವಿುನಲ್ಲಿ ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸನ್ಬಲ್ಲಟನೂ, ಗೆಷೆಮನೂ ನನಗೆ, “ಓನೋ ಎಂಬ ಬಯಲಿನಲ್ಲಿರುವ ಗ್ರಾಮಗಳಲ್ಲಿ ಎದುರುಗೊಳ್ಳೋಣ ಬಾ,” ಎಂದರು. ಆದರೆ ಅವರು ನನಗೆ ಕೇಡು ಮಾಡಲು ಯೋಜಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:2
15 ತಿಳಿವುಗಳ ಹೋಲಿಕೆ  

ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.


ಎಲ್ಪಾಲನ ಮಕ್ಕಳು ಯಾರೆಂದರೆ: ಏಬೆರ್, ಮಿಷ್ಬಾಮ್, ಶೆಮೆದ್, ಬೆರೀಯ ಮತ್ತು ಶಮ. ಶೆಮೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿಸಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದವರಿಗೆ ಬೆರೀಯ ಮತ್ತು ಶಮ ಕುಲ ಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು.


ಲೋದ್, ಓನೋ ಮತ್ತು ಗೇಹರಾಷೀಮ್ ಶಿಲ್ಪಿಯವರ ಕಣಿವೆ ಇವುಗಳಲ್ಲಿ ನೆಲೆಸಿದರು.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಕೆಡುಕರಾದರೋ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.”


ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು