Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:3 - ಪರಿಶುದ್ದ ಬೈಬಲ್‌

3 ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನನಗೆ ಕೇಡು ಬಗೆಯುವವರು ಎಂದು ತಿಳಿದು ನಾನು ದೂತರ ಮುಖಾಂತರವಾಗಿ ಅವರಿಗೆ - ನನಗೆ ದೊಡ್ಡ ಜಂಬರವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವದು; ನಾನು ಬರಲಾರೆನು ಎಂದು ಹೇಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:3
9 ತಿಳಿವುಗಳ ಹೋಲಿಕೆ  

ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


‘ಇವನು ಈ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಆದರೆ ಪೂರೈಸಲು ಅವನಿಂದಾಗಲಿಲ್ಲ’ ಎಂದು ಗೇಲಿ ಮಾಡುವರು.


ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು.


ಸನ್ಬಲ್ಲಟನೂ ಗೆಷೆಮನೂ ಅದೇ ಸಂದೇಶವನ್ನು ನಾಲ್ಕು ಸಲ ಕಳುಹಿಸಿದರು. ಪ್ರತಿ ಸಾರಿಯೂ ಅದೇ ಉತ್ತರವನ್ನು ನಾನು ಅವರಿಗೆ ಕಳುಹಿಸಿದೆನು.


ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು