Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:6 - ಪರಿಶುದ್ದ ಬೈಬಲ್‌

6 ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದರಲ್ಲಿ, “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ನನ್ನ ಮೇಲೆ ದಾಳಿಮಾಡಬೇಕೆಂದಿದ್ದೀರಿ; ಆದುದರಿಂದಲೇ, ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ. ನೀನು ಅವರ ಅರಸನಾಗುವೆ ಎಂಬ ಸುದ್ದಿ ಜನರಲ್ಲಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರಲ್ಲಿ - ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ತಿರುಗಿಬೀಳಬೇಕೆಂದಿದ್ದೀರಿ; ಆದದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತೀ. ಮತ್ತು ನೀನು ಅವರ ಅರಸನಾಗುವಿಯೆಂಬ ಸುದ್ದಿಯು ಜನರಲ್ಲಿ ಹಬ್ಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದರಲ್ಲಿ ಹೀಗೆ ಬರೆದಿತ್ತು: “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:6
16 ತಿಳಿವುಗಳ ಹೋಲಿಕೆ  

ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


“ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.


ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.


ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.


ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.


ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು.


ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು.


ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು