7 ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು.
7 ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.
7 ಇದಲ್ಲದೆ, ಜುದೇಯದಲ್ಲಿ ಒಬ್ಬ ಅರಸನಿದ್ದಾನೆಂದು ನಿನ್ನನ್ನು ಕುರಿತು ಜೆರುಸಲೇಮಿನಲ್ಲಿ ಪ್ರಕಟಿಸುವುದಕ್ಕಾಗಿ ಪ್ರವಾದಿಗಳನ್ನು ನೇಮಿಸಿರುವೆ ಎಂಬುದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟಲಿದೆ; ಆದುದರಿಂದ ಕೂಡಿ ಮಾತಾಡೋಣ ಬಾ,” ಎಂದು ಬರೆದಿತ್ತು.
7 ಇದಲ್ಲದೆ ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆಂದು ನಿನ್ನನ್ನು ಕುರಿತು ಯೆರೂಸಲೇವಿುನಲ್ಲಿ ಪ್ರಕಟಿಸುವದಕ್ಕೋಸ್ಕರ ಪ್ರವಾದಿಗಳನ್ನು ನೇವಿುಸಿದ್ದಿ ಎಂಬದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟುವದು; ಆದದರಿಂದ ಕೂಡಿ ಮಾತಾಡೋಣ ಬಾ ಎಂದು ಬರೆದಿತ್ತು.
7 ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದೂ ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವುದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನಾಂಗಗಳಲ್ಲಿ ಸುದ್ದಿ ಉಂಟು. ಈಗ ಈ ವರ್ತಮಾನ ಅರಸನಿಗೆ ತಿಳಿಸಲಾಗುವುದು. ಆದಕಾರಣ ನಾವು ಕೂಡಿಕೊಂಡು ಯೋಚನೆ ಮಾಡಿಕೊಳ್ಳೋಣ ಬಾ.”
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.
ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.
ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.