ನೆಹೆಮೀಯ 7:3 - ಪರಿಶುದ್ದ ಬೈಬಲ್3 ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲೇ ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ, ಜೆರುಸಲೇಮಿನ ನಿವಾಸಿಗಳಲ್ಲೇ ಕಾವಲುಗಾರರನ್ನು ಗೊತ್ತುಮಾಡಿರಿ. ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲೇ ಕಾವಲಿರುವಂತೆ ನೇಮಿಸಿರಿ,” ಎಂದು ಆಜ್ಞಾಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರಿಗೆ - ಬಿಸಿಲು ಬಲಿಯುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಷ್ಟರಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇವಿುನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ. ಅವರಲ್ಲಿ ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲಿ ಕಾವಲಿರುವಂತೆ ನೇವಿುಸಬೇಕು ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |