6 ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು.
6 ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ
ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.
ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.
ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.
ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ: