Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:1 - ಪರಿಶುದ್ದ ಬೈಬಲ್‌

1 ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:1
25 ತಿಳಿವುಗಳ ಹೋಲಿಕೆ  

ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.


ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು.


ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:


ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


“ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಅವರು ಬುಗ್ಗೆ ಬಾಗಿಲಿನೊಳಗೆ ಪ್ರವೇಶಿಸಿ, ಮೆಟ್ಟಲುಗಳನ್ನು ಹತ್ತಿ ದಾವೀದ ನಗರದ ತನಕ ಹೋದರು. ಈಗ ಅವರು ನಗರದ ಗೋಡೆಯನ್ನು ಹತ್ತಿ ದಾವೀದನ ಮನೆಯ ಮೇಲ್ಗಡೆಯಿಂದ, “ನೀರು” ಎಂಬ ದ್ವಾರದ ಕಡೆಗೆ ಹೋದರು.


ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.


ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ಅರಸನೂ ಯೆಹೂದದಲ್ಲಿ ವಾಸಿಸುವ ಜನರೂ ಜೆರುಸಲೇಮಿನಲ್ಲಿ ವಾಸಿಸುವ ಜನರೂ ಯಾಜಕರೂ ಲೇವಿಯರೂ ದೊಡ್ಡವರು ಸಣ್ಣವರು ಎಂಬ ವ್ಯತ್ಯಾಸವಿಲ್ಲದೆ ತಮ್ಮ ಅರಸನೊಂದಿಗೆ ಇದ್ದರು. ಯೋಷೀಯನು ಧರ್ಮಶಾಸ್ತ್ರವನ್ನು ಜನರಿಗೆ ಓದಿ ತಿಳಿಸಿದನು. ಆ ಪುಸ್ತಕವು ದೇವಾಲಯದಲ್ಲಿ ಸಿಕ್ಕಿತ್ತು.


ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.


ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.


ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆ ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು.


ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.


ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.


ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.


ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು