ನೆಹೆಮೀಯ 8:10 - ಪರಿಶುದ್ದ ಬೈಬಲ್10 “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.