ನೆಹೆಮೀಯ 8:12 - ಪರಿಶುದ್ದ ಬೈಬಲ್12 ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಭಾಗಗಳನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು. ಅಧ್ಯಾಯವನ್ನು ನೋಡಿ |