ನೆಹೆಮೀಯ 8:16 - ಪರಿಶುದ್ದ ಬೈಬಲ್16 ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.