ನೆಹೆಮೀಯ 8:17 - ಪರಿಶುದ್ದ ಬೈಬಲ್17 ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೂನನ ಮಗ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿಬಂದ ಸರ್ವಸಮಾಜದವರು ಪರ್ಣಕುಟೀರಗಳನ್ನು ಮಾಡಿಕೊಂಡು, ಅವುಗಳಲ್ಲಿ ವಾಸಿಸುತ್ತಾ, ಬಹು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೂನನ ಮಗನಾದ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಾಯೇಲ್ಯರು ಹೀಗೆ ಮಾಡಿದ್ದಿಲ್ಲ. ಸೆರೆಯಿಂದ ತಿರಿಗಿ ಬಂದ ಸರ್ವಸಮೂಹದವರಾದರೋ ಪರ್ಣಶಾಲೆಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಿಸುತ್ತಾ ಬಹು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು. ಅಧ್ಯಾಯವನ್ನು ನೋಡಿ |