ನೆಹೆಮೀಯ 8:3 - ಪರಿಶುದ್ದ ಬೈಬಲ್3 ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!