Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:6 - ಪರಿಶುದ್ದ ಬೈಬಲ್‌

6 ಎಜ್ರನು ಮಹೋನ್ನತ ದೇವರಾದ ಯೆಹೋವನನ್ನು ಸ್ತುತಿಸಿದನು. ಆಗ ಜನರೆಲ್ಲರೂ ಕೈಗಳನ್ನೆತ್ತಿ, “ಆಮೆನ್! ಆಮೆನ್!” ಎಂದು ಹೇಳಿದರು; ತಲೆಬಾಗಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಜ್ರನು ಪರಾತ್ಪರ ದೇವರಾದ ಯೆಹೋವನನ್ನು ಸ್ತುತಿಸಿದ್ದಕ್ಕೆ ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಎಜ್ರನು ಮಹಾ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಉತ್ತರವಾಗಿ, “ಆಮೆನ್, ಆಮೆನ್,” ಎಂದು ಹೇಳಿ ನೆಲದವರೆಗೂ ತಮ್ಮ ತಲೆಗಳನ್ನು ಬಗ್ಗಿಸಿ ಯೆಹೋವ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:6
30 ತಿಳಿವುಗಳ ಹೋಲಿಕೆ  

ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


ಯೆಹೋಷಾಫಾಟನು ನೆಲದ ಮೇಲೆ ಸಾಷ್ಟಾಂಗನಮಸ್ಕಾರ ಮಾಡಿದನು. ಹಾಗೆಯೇ, ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.


ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ.


ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.


ಆಗ ಆ ಸೇವಕನು ತಲೆಬಾಗಿ ಯೆಹೋವನನ್ನು ಆರಾಧಿಸಿದನು.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು. “ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.”


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು.


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್!


ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


“ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ,


ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ,


ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.


ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.


ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ! ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು