ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.