ನೆಹೆಮೀಯ 9:1 - ಪರಿಶುದ್ದ ಬೈಬಲ್1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲ್ಯರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು. ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.