Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:15 - ಪರಿಶುದ್ದ ಬೈಬಲ್‌

15 ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:15
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.


ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.


ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.


ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದ್ದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.


ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ,


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು