Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:16 - ಪರಿಶುದ್ದ ಬೈಬಲ್‌

16 ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹಠಮಾರಿಗಳಾದರು; ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೂ ನಮ್ಮ ಪಿತೃಗಳು ಗರ್ವಿಗಳಾಗಿ ಹಟಹಿಡಿದು ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:16
33 ತಿಳಿವುಗಳ ಹೋಲಿಕೆ  

ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.”


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡದ್ದು ನಿನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ.


ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.


ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಅಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!


“ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ. ಇಸ್ರೇಲೇ, ದಯವಿಟ್ಟು ಕಿವಿಗೊಡು!


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.


ಆದರೆ ಅವರು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ; ತಮ್ಮ ದೇವರಾದ ಯೆಹೋವನನ್ನು ನಂಬದೆಹೋದ ತಮ್ಮ ಪೂರ್ವಿಕರನ್ನೇ ಅನುಸರಿಸಿದರು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೋ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.


“ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು.


ನಿಮ್ಮ ದೇವರಾದ ಯೆಹೋವನು ಆ ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹಠಮಾರಿಗಳು.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಬಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”


ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು