Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:2 - ಪರಿಶುದ್ದ ಬೈಬಲ್‌

2 ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್‍ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:2
24 ತಿಳಿವುಗಳ ಹೋಲಿಕೆ  

ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.


ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”


ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು.


ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.


ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”


ಈ ಅನ್ಯಜನರಿಂದ ನನ್ನನ್ನು ರಕ್ಷಿಸು. ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ. ಅವರ ಬಲಗೈಗಳು ಮೋಸದಿಂದ ತುಂಬಿವೆ.


ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.


ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.


ಮೇಲಿನ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೋ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.


“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.


“ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”


ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ.


ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


ಯೆಹೋವನೇ, ನಾವು ಬಹಳ ಕೆಟ್ಟ ಜನರೆಂಬುದು ನಮಗೆ ಗೊತ್ತು. ನಮ್ಮ ಪೂರ್ವಿಕರು ದುಷ್ಕೃತ್ಯಗಳನ್ನು ಮಾಡಿದರೆಂಬುದನ್ನು ನಾವು ಬಲ್ಲೆವು. ಹೌದು, ನಾವು ನಿನ್ನ ವಿರುದ್ಧ ಪಾಪಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು