Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:20 - ಪರಿಶುದ್ದ ಬೈಬಲ್‌

20 ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:20
24 ತಿಳಿವುಗಳ ಹೋಲಿಕೆ  

ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯತೊಡಗಿತು!


ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ.


ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.


ಒಂದೇ ಆತ್ಮಿಕ ಆಹಾರವನ್ನು ಊಟ ಮಾಡಿದರು;


ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’


ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.


ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು