ನೆಹೆಮೀಯ 9:26 - ಪರಿಶುದ್ದ ಬೈಬಲ್26 ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.