ನೆಹೆಮೀಯ 9:27 - ಪರಿಶುದ್ದ ಬೈಬಲ್27 ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ. ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.