Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:30 - ಪರಿಶುದ್ದ ಬೈಬಲ್‌

30 “ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:30
34 ತಿಳಿವುಗಳ ಹೋಲಿಕೆ  

ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:


ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಪಾಳೆಯದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.


ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.


ಆದ್ದರಿಂದ ಚಿಕ್ಕಕೂಸುಗಳೊಂದಿಗೆ ಮಾತಾಡುವಂತೆ ಯೆಹೋವನು ಅವರ ಸಂಗಡ ಮಾತಾಡುತ್ತಾನೆ: “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.”


“ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.


ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.


ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಂದ ಈ ಸಂಗತಿಗಳನ್ನು ತಿಳಿಸಿದನು.


ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.


“ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.


ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು