ನೆಹೆಮೀಯ 9:32 - ಪರಿಶುದ್ದ ಬೈಬಲ್32 ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ. ಅಧ್ಯಾಯವನ್ನು ನೋಡಿ |
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.