ನೆಹೆಮೀಯ 9:34 - ಪರಿಶುದ್ದ ಬೈಬಲ್34 ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಮ್ಮ ಅರಸರೂ ಪ್ರಭುಗಳೂ ಯಾಜಕರೂ ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ; ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಲಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು. ಅಧ್ಯಾಯವನ್ನು ನೋಡಿ |
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.