Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:35 - ಪರಿಶುದ್ದ ಬೈಬಲ್‌

35 ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; ಕೆಟ್ಟತನವನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಸಾರವುಳ್ಳ ವಿಸ್ತಾರದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಸೇವಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದದರಿಂದಲೇ ನಾವು ಈಗ ದಾಸರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವರು ತಮ್ಮ ರಾಜ್ಯದಲ್ಲಿಯೂ, ನೀವು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀವು ಅವರಿಗೆ ಕೊಟ್ಟ ವಿಸ್ತಾರವಾದ, ರಸವತ್ತಾದ ದೇಶದಲ್ಲಿಯೂ, ನಿಮ್ಮನ್ನು ಸೇವಿಸಲಿಲ್ಲ. ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:35
11 ತಿಳಿವುಗಳ ಹೋಲಿಕೆ  

“ನಿಮ್ಮದೇವರಾದ ಯೆಹೋವನು ನಿಮಗೆ ಹೆಚ್ಚಾದ ಆಶೀರ್ವಾದವನ್ನು ಕೊಟ್ಟನು. ಆದರೆ ನೀವು ಸಂತೋಷ ಮತ್ತು ಉಪಕಾರದ ಹೃದಯದಿಂದ ಆತನ ಸೇವೆಮಾಡಲಿಲ್ಲ.


ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”


ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.


ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”


ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಬಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು