36 ನೀನು ನಮ್ಮ ಪಿತೃಗಳಿಗೆ - ಇದರ ಉತ್ಪನ್ನವನ್ನೂ ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿದೆ. ನಮ್ಮ ಪಾಪಗಳ ನಿವಿುತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇವಿುಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತದೆ.
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.
ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.