Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:37 - ಪರಿಶುದ್ದ ಬೈಬಲ್‌

37 ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:37
11 ತಿಳಿವುಗಳ ಹೋಲಿಕೆ  

“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.


ಯೆಹೂದ್ಯರು, “ನಾವು ಅಬ್ರಹಾಮನ ಮಕ್ಕಳು. ನಾವೆಂದೂ ಯಾರ ಗುಲಾಮರೂ ಆಗಿರಲಿಲ್ಲ. ಹೀಗಿದ್ದರೂ, ನಮಗೆ ಬಿಡುಗಡೆ ಆಗುವುದೆಂದು ನೀನು ಹೇಳುವುದೇಕೆ?” ಎಂದು ಉತ್ತರಕೊಟ್ಟರು.


“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.


ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು