Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:5 - ಪರಿಶುದ್ದ ಬೈಬಲ್‌

5 ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:5
36 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.


ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.


ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು.


ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.


ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.


ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.


ಕೆಹಾತ್ಯನ ಕುಲದವರಾದ ಲೇವಿಯರೂ ಕೋರಹನ ವಂಶದವರೂ ಎದ್ದುನಿಂತು ಇಸ್ರೇಲ್ ದೇವರಾದ ಯೆಹೋವನಿಗೆ ಗಟ್ಟಿಯಾದ ಸ್ವರದಿಂದ ಸ್ತುತಿಗೀತೆ ಹಾಡಿದರು.


ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,


ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು.


“ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ಯೆಹೋವನ ದೂತನು, “ನೀನು ನನ್ನ ಹೆಸರನ್ನು ಏಕೆ ಕೇಳುವೆ? ಅದು ನೀನು ನಂಬಲಾರದಷ್ಟು ಆಶ್ಚರ್ಯಕರವಾದದ್ದು” ಅಂದನು.


ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ.


ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.


“ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು