ನ್ಯಾಯಸ್ಥಾಪಕರು 1:1 - ಪರಿಶುದ್ದ ಬೈಬಲ್1 ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.