12 ಯೆಹೂದ್ಯರು ಯುದ್ಧ ಆರಂಭಿಸುವ ಮುನ್ನ ಕಾಲೇಬನು ಜನರಿಗೆ, “ಕಿರ್ಯತ್‌ಸೇಫೆರನ್ನು ಗೆದ್ದುಕೊಳ್ಳಬೇಕೆಂದು ನನ್ನ ಇಚ್ಛೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವನಿಗೆ ನಾನು ನನ್ನ ಮಗಳಾದ ಅಕ್ಷಾಳನ್ನು ಮದುವೆ ಮಾಡಿಕೊಡುತ್ತೇನೆ” ಎಂದು ಹೇಳಿದನು.
ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.
ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು.
ಕಾಲೇಬನಿಗೆ ಕೆನಜನೆಂಬ ತಮ್ಮನಿದ್ದನು. ಕೆನಜನಿಗೆ ಒತ್ನೀಯೇಲನೆಂಬ ಮಗನಿದ್ದನು. ಒತ್ನೀಯೇಲನು ಕಿರ್ಯತ್‌ಸೇಫೆರನ್ನು ಗೆದ್ದುಕೊಂಡನು. ಅದಕ್ಕಾಗಿ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನ ಜೊತೆ ಮದುವೆ ಮಾಡಿಕೊಟ್ಟನು.
ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು?
ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.