ನ್ಯಾಯಸ್ಥಾಪಕರು 1:16 - ಪರಿಶುದ್ದ ಬೈಬಲ್16 ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |
ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.