ನ್ಯಾಯಸ್ಥಾಪಕರು 1:22 - ಪರಿಶುದ್ದ ಬೈಬಲ್22-23 ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು. ಅಧ್ಯಾಯವನ್ನು ನೋಡಿ |
ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.