Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:27 - ಪರಿಶುದ್ದ ಬೈಬಲ್‌

27 ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮನಸ್ಸೆಯವರು ಬೇತ್‍ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:27
16 ತಿಳಿವುಗಳ ಹೋಲಿಕೆ  

ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.


ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.


ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್‌ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


“ನೀವು ಆ ಜನರೊಡನೆಯಾಗಲಿ ಅವರ ದೇವರುಗಳೊಡನೆಯಾಗಲಿ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲೊಂದು ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ.


ಅನಂತರ ಇಸ್ರೇಲರು ಪ್ರಬಲರಾಗಿ ಬಲವಂತದಿಂದ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಎಲ್ಲಾ ಕಾನಾನ್ಯರನ್ನೂ ಅವರ ಮನೆಗಳಿಂದ ಹೊರಗಟ್ಟಲು ಇಸ್ರೇಲರಿಗೆ ಸಾಧ್ಯವಾಗಲಿಲ್ಲ.


ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.


ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.


ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು