ನ್ಯಾಯಸ್ಥಾಪಕರು 1:6 - ಪರಿಶುದ್ದ ಬೈಬಲ್6 ಬೆಜೆಕ್‌ನ ಅರಸನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದನು. ಆದರೆ ಯೆಹೂದ್ಯರು ಅವನನ್ನು ಬೆನ್ನಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದೋನೀಬೆಜೆಕನು ಅಲ್ಲಿಂದ ಓಡಿಹೋಗುತ್ತಿರುವಾಗ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು. ಅಧ್ಯಾಯವನ್ನು ನೋಡಿ |
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.